varthabharthi

ಕರಾವಳಿ

ಸೆ.12ರಂದು ಉಡುಪಿಜಿಲ್ಲಾ ಕಾಂಗ್ರೆಸ್‌ನಿಂದ ಧರಣಿ ಸತ್ಯಾಗ್ರಹ

ವಾರ್ತಾ ಭಾರತಿ : 11 Sep, 2019

ಉಡುಪಿ, ಸೆ.11: ರಾಜ್ಯದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ 22 ಜಿಲ್ಲೆಗಳಲ್ಲಿ ಭಾರೀ ಪ್ರಮಾಣದ ಆಸ್ತಿಪಾಸ್ತಿಗಳಿಗೆ ನಷ್ಟವುಂಟಾದರೂ ಕೇಂದ್ರ ಸರಕಾರ ರಾಜ್ಯಕ್ಕೆ ಬಿಡಿಗಾಸೂ ಪರಿಹಾರ ಬಿಡುಗಡೆ ಮಾಡದ ನಿರ್ಲಕ್ಷ ಧೋರಣೆಯನ್ನು ಖಂಡಿಸಿ ಹಾಗೂ ಕೇಂದ್ರದ ಜನ ವಿರೋಧಿ ನೀತಿಯಾದ ಮೋಟಾರು ವಾಹನ ಕಾಯಿದೆಯ ತಿದ್ದುಪಡಿಯನ್ನು ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೆ.12ರ ಬೆಳಗ್ಗೆ 10:30ಕ್ಕೆ ನಗರದ ಜೋಡುಕಟ್ಟೆ ಬಳಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)