varthabharthi

ಬೆಂಗಳೂರು

ಶಾಂತಿಯುತ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅಭಿನಂದನೆ

ವಾರ್ತಾ ಭಾರತಿ : 11 Sep, 2019

ಬೆಂಗಳೂರು, ಸೆ.11: ವಿಶ್ವ ಒಕ್ಕಲಿಗರ ಮಹಾವೇದಿಕೆ, ನಾಡಪ್ರಭು ಒಕ್ಕಲಿಗರ ಕೇಂದ್ರ ಹಾಗೂ ರಾಜ್ಯ ಒಕ್ಕಲಿಗರ ಕೆಂಪೇಗೌಡ ಯುವಶಕ್ತಿ ವೇದಿಕೆ ನೇತೃತ್ವದಲ್ಲಿ ಸೆ.11ರಂದು ನಗರದಲ್ಲಿ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಶಾಂತಿಯುತವಾಗಿ ನಡೆಸಿದಕ್ಕಾಗಿ ಆಯೋಜಕರಿಗೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ.

ಜಾರಿ ನಿರ್ದೇಶನಾಲಯ(ಇಡಿ) ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧಿಸಿರುವುದನ್ನು ವಿರೋಧಿಸಿ ನಗರದ ನ್ಯಾಷನಲ್ ಕಾಲೇಜು ಮೈದಾನದಿಂದ ಸ್ವಾತಂತ್ರ ಉದ್ಯಾನವನದವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ಸುಮಾರು 50 ಸಾವಿರ ಮಂದಿ ಸೇರಿದ್ದರು. ಆದಾಗ್ಯು ಪ್ರತಿಭಟನೆಯ ವೇಳೆ ಎಲ್ಲಿಯೂ ಕಾನೂನು ಉಲ್ಲಂಘನೆ ಆಗದ ರೀತಿಯಲ್ಲಿ ಶಾಂತಿಯುತವಾಗಿ ಪ್ರತಿಭಟನಾ ರ‍್ಯಾಲಿ ಮುಗಿದಿದೆ. ಹೀಗಾಗಿ ಆಯೋಜಕರಿಗೆ ಪೊಲೀಸ್ ಇಲಾಖೆ ಅಭಿನಂದನೆ ಸಲ್ಲಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)