ವಿದ್ಯಾರ್ಥಿನಿಯ ಮೃತದೇಹ ಪತ್ತೆ: ಆರೋಪಿ ಪ್ರಿಯಕರನ ಬಂಧನ
ಕಲಬುರ್ಗಿ, ಸೆ.11: ಜಿಲ್ಲೆಯ ತೆಲಂಗಾಣ ಗಡಿಯಲ್ಲಿರುವ ಪರಗಿ ಗ್ರಾಮದ ಬಳಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಸುಟ್ಟುಹಾಕಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮೃತ ಯುವತಿಯ ಪ್ರಿಯಕರ ರವಿ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಆರೋಪಿ, ಇಬ್ಬರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದೆವು. ಯುವತಿ ಗರ್ಭಿಣಿಯಾಗಿದ್ದರಿಂದ ಗರ್ಭಪಾತ ಮಾಡಿಸುವ ವೇಳೆ ಆಕೆ ಮೃತಪಟ್ಟಿದ್ದಾಳೆ. ಹೀಗಾಗಿ ಆಕೆಯ ಶವವನ್ನು ತೆಲಂಗಾಣ ಗಡಿ ಪರಗಿಯಲ್ಲಿ ಸುಟ್ಟು ಹಾಕಿದೆ ಎಂದು ಮಾಹಿತಿ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರವಿ ಪೂಜಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೋಷಕರು ಆಗ್ರಹಿಸಿದ್ದಾರೆ.
Next Story