varthabharthi

ಕರ್ನಾಟಕ

377ನೇ ಕಾಯ್ದೆ ತಿದ್ದುಪಡಿ ಜಾರಿಗೆ ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಆಗ್ರಹ

ವಾರ್ತಾ ಭಾರತಿ : 11 Sep, 2019

ಬೆಂಗಳೂರು, ಸೆ.11: ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಅಭ್ಯುದಯಕ್ಕಾಗಿ ಸುಪ್ರೀಂ ಕೋರ್ಟ್ 377ನೇ ಕಾಯ್ದೆಗೆ ತಿದ್ದುಪಡಿ ಮಾಡಿ ಅನುಷ್ಠಾನಗೊಳಿಸಿರುವುದನ್ನು ರಾಜ್ಯ ಸರಕಾರ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಲೈಂಗಿಕ ಅಲ್ಪಸಂಖ್ಯಾತ ಸಮುದಾಯ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮುದಾಯದ ಸದಸ್ಯ ಹರೀಶ್, ಸರ್ವೋಚ್ಚ ನ್ಯಾಯಾಲಯ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ 2018 ಸೆಪ್ಟೆಂಬರ್ 6ರಂದು 377ನೇ ಕಾಯ್ದೆಗೆ ತಿದ್ದುಪಡಿ ಮಾಡಿ ಐತಿಹಾಸಿಕ ತೀರ್ಪು ನೀಡಿದೆ. ಇದೊಂದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಲೈಂಗಿಕ ಕಾರ್ಯಕರ್ತರು ಸಮಾಜದಲ್ಲಿ ಬದುಕುವ ಹಕ್ಕನ್ನು ಪಡೆದಿದ್ದು, ಪ್ರೀತಿ, ವಿಶ್ವಾಸ ಹಾಗೂ ಸಹಬಾಳ್ವೆಗೆ ಪೂರಕವಾಗಿದೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್‌ನ ಆದೇಶವನ್ನು ರಾಜ್ಯ ಸರಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಇರುವುದರಿಂದ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಸಮಾಜದೊಂದಿಗೆ ಸಹಬಾಳ್ವೆ ನಡೆಸಲು ಅವಕಾಶ ಸಿಗದೆ ವಂಚಿತರಾಗಿದ್ದೇವೆ. ನಮಗೆ ಬದುಕು ಕಟ್ಟಿಕೊಳ್ಳಲು ಉದ್ಯೋಗ, ಶಿಕ್ಷಣ ಹಾಗೂ ಸ್ವಾತಂತ್ರ್ಯ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ರಾಜ್ಯ ಸರಕಾರ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)