varthabharthi

ಕರಾವಳಿ

ಸೆ.17: ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ

ವಾರ್ತಾ ಭಾರತಿ : 11 Sep, 2019

ಮಂಗಳೂರು, ಸೆ.11: ಜಿಲ್ಲಾಡಳಿತ, ಜಿಪಂ, ಮಂಗಳೂರು ಮಹಾನಗರ ಪಾಲಿಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವಜನ ಒಕ್ಕೂಟ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ 2019-20ರ ಉದ್ಘಾಟನಾ ಸಮಾರಂಭವು ಸೆ.17ರಂದು ಬೆಳಗ್ಗೆ 10 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟನೆ ನಡೆಸಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಕ್ರೀಡಾ ಕೂಟಕ್ಕೆ ಚಾಲನೆ ನೀಡಲಿದ್ದಾರೆ.

ಕ್ರೀಡಾಕೂಟದಲ್ಲಿ ಭಾಗವಹಿಸುವ ಸ್ಪರ್ಧಾಳುಗಳು ಸೆ.17ರಂದು ಬೆಳಗ್ಗೆ 9 ಗಂಟೆಗೆ ಸರಿಯಾಗಿ ಮಂಗಳಾ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)