varthabharthi

ಕರಾವಳಿ

ಉಡುಪಿ: ಜ್ಯೋತಿ ಎನ್.ಮೂರ್ತಿ ನಿಧನ

ವಾರ್ತಾ ಭಾರತಿ : 11 Sep, 2019

ಉಡುಪಿ, ಸೆ.11: ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಿ.ನರಸಿಂಹ ಮೂರ್ತಿ ಅವರ ಪತ್ನಿ ಜ್ಯೋತಿ ಎನ್.ಮೂರ್ತಿ ಅವರು ಬುಧವಾರ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನಹೊಂದಿದರು. ಅವರಿಗೆ 52 ವರ್ಷ ಪ್ರಾಯವಾಗಿತ್ತು.

ಮೃತರು ಪತಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡೀಸ್, ಪ್ರಮೋದ್ ಮಧ್ವರಾಜ್, ಜಯಪ್ರಕಾಶ್ ಹೆಗ್ಡೆ ಮುಂತಾದವರು ಜ್ಯೋತಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಯು.ಆರ್.ಸಭಾಪತಿ, ಡಿಸಿಸಿ ಅಧ್ಯಕ್ಷ ಅಶೋಕಕುಮಾರ ಕೊಡವೂರು, ಜನಾರ್ದನ ತೋನ್ಸೆ, ವೆರೋನಿಕಾ ಕರ್ನೇಲಿಯೊ, ಗೀತಾ ವಾಗ್ಳೆ ಮುಂತಾದವರು ಮೃತರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)