varthabharthi


ರಾಷ್ಟ್ರೀಯ

ಜಮ್ಮು-ಕಾಶ್ಮೀರದ ನಿರ್ಬಂಧ ವಿರೋಧಿಸಿ ರಾಜಿನಾಮೆ ನೀಡಿದ್ದ ಐಎಎಸ್ ಅಧಿಕಾರಿ

ಅನುಚಿತ ವರ್ತನೆಗಾಗಿ ಕಣ್ಣನ್ ಗೋಪಿನಾಥ್‌ಗೆ ನೋಟಿಸ್ ಜಾರಿ ಮಾಡಲಾಗಿತ್ತು ಎಂದ ಗೃಹ ಸಚಿವಾಲಯದ ಅಧಿಕಾರಿಗಳು

ವಾರ್ತಾ ಭಾರತಿ : 11 Sep, 2019

ಹೊಸದಿಲ್ಲಿ,ಸೆ.11: ಜಮ್ಮು ಮತ್ತು ಕಾಶ್ಮೀರದಲ್ಲಿ ನಿರ್ಬಂಧ ಹೇರಿರುವುದನ್ನು ಖಂಡಿಸಿ ಆಗಸ್ಟ್‌ ನಲ್ಲಿ ಹುದ್ದೆಯನ್ನು ತ್ಯಜಿಸಿದ್ದ ಐಎಎಸ್ ಅಧಿಕಾರಿ ಕಣ್ಣನ್ ಗೋಪಿನಾಥ್ ಅವರಿಗೆ ಕೇಂದ್ರ ಗೃಹ ಸಚಿವಾಲಯ ಜುಲೈಯಲ್ಲಿ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಪಿನಾಥ್ ಅವರು ಅನುಚಿತ ವರ್ತನೆ ಮತ್ತು ಕರ್ತವ್ಯ ಲೋಪದ ಹಲವು ಆರೋಪಗಳನ್ನು ಎದುರಿಸುತ್ತಿದ್ದ ಕಾರಣ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 2018ರ ಕೇರಳ ನೆರೆ ಹಾವಳಿ ಸಂದರ್ಭದಲ್ಲಿ ನಡೆಸಿದ್ದ ಕಾರ್ಯಕ್ಕಾಗಿ ಶ್ಲಾಘನೆಗೊಳಗಾಗಿದ್ದ 33ರ ಹರೆಯದ ಗೋಪಿನಾಥ್, ಜಮ್ಮು ಮತ್ತು ಕಾಶ್ಮೀರದಲ್ಲಿ ಹೇರಲಾಗಿರುವ ನಿರ್ಬಂಧದಿಂದ ತೀವ್ರ ಕಳವಳಗೊಂಡಿದ್ದೇನೆ ಎಂದು ಹೇಳಿಕೆ ನೀಡಿದ್ದ ಗೋಪಿನಾಥ್ ಆಗಸ್ಟ್ 21ರಂದು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಸದ್ಯ ಗೋಪಿನಾಥ್ ಅವರು ದಮನ್ ಮತ್ತು ದಿಯು ಹಾಗೂ ದಾದರ್ ಮತ್ತು ನಗರ್ ಹವೇಲಿಯ ಕೇಂದ್ರಾಡಳಿತದಿಂದ ಶಿಸ್ತುಕ್ರಮಕ್ಕೆ ಒಳಗಾಗುವ ಪ್ರಸ್ತಾವವನ್ನು ಗೃಹ ಸಚಿವಾಲಯ ಮಾಡಿದ್ದ ಕಾರಣ ಅವರು ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಪಿನಾಥ್ ಅವರು ದಾದರ್ ಮತ್ತು ನಗರ್ ಹವೇಲಿಯಲ್ಲಿ ವಿದ್ಯುತ್ ಮತ್ತು ಅಸಾಂಪ್ರದಾಯಿಕ ಇಂಧನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಐಎಎಸ್ ಅಧಿಕಾರಿ ಹಲವು ತಪ್ಪುಗಳನ್ನು ಎಸಗುತ್ತಿದ್ದಾರೆ ಇದು ಕರ್ತವ್ಯಲೋಪಕ್ಕೆ ಸಮವಾಗಿದೆ ಎಂದು ಕೇಂದ್ರಾಡಳಿತ ಗೃಹ ಸಚಿವಾಲಯಕ್ಕೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ಗೋಪಿನಾಥ್‌ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)