varthabharthi

ಕರಾವಳಿ

ಪಿಕ್‌ಅಪ್ ಢಿಕ್ಕಿ: ಬೈಕ್ ಸವಾರ ಮೃತ್ಯು

ವಾರ್ತಾ ಭಾರತಿ : 11 Sep, 2019

ಕಾರ್ಕಳ, ಸೆ.11: ಬೊಲೆರೋ ಪಿಕ್‌ಅಪ್ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿ ಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸಾಣೂರು ಗ್ರಾಮದ ಶ್ರೀರಾಮ ಮಂದಿರ ಬಳಿಯ ಬೆಳುವಾಯಿ-ಕಾರ್ಕಳ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಸೆ.10ರಂದು ಸಂಜೆ 5.30ರ ಸುಮಾರಿಗೆ ನಡೆದಿದೆ.

ಮೃತರನ್ನು ಬೈಕ್ ಸವಾರ ಫಾಸ್ಕಲ್ ಜೋಸೆಫ್ ಡಿಸೋಜ ಎಂದು ಗುರು ತಿಸಲಾಗಿದೆ. ಬೆಳುವಾಯಿ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಪಿಕ್‌ಅಪ್ ವಾಹನ ಕಾರ್ಕಳ ಕಡೆಯಿಂದ ಬೆಳುವಾಯಿ ಕಡೆಗೆ ಬರುತ್ತಿದ್ದ ಬೈಕ್‌ಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಫಾಸ್ಕಲ್ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಮೃತ ಪಟ್ಟರೆನ್ನಲಾಗಿದೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)