varthabharthi


ರಾಷ್ಟ್ರೀಯ

ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ವಾರ್ತಾ ಭಾರತಿ : 11 Sep, 2019

ಮುಝಫ್ಫರ್‌ನಗರ,ಸೆ.11: ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಪೋಸ್ಟ್ ಮಾಡಿದ ಆರೋಪದಲ್ಲಿ ಉತ್ತರ ಪ್ರದೇಶದ ಮುಝಫ್ಫರ್‌ನಗರದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮ್ ಮೆಘಲಿ ಎಂಬವರು ನೀಡಿದ ದೂರಿನ ಆಧಾರದಲ್ಲಿ ಬಿಜೆಂದರ್ ಸೈನಿ ಮತ್ತು ಪ್ರಿನ್ಸ್ ಅಶೋಕ್ ಆಚಾರ್ಯ ಎಂಬವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಪ್ರಧಾನಿ ಮೋದಿಯ ಭಾವಚಿತ್ರದ ಜೊತೆಗೆ ಆಕ್ಷೇಪಾರ್ಹ ಹೇಳಿಕೆ ಪೋಸ್ಟ್ ಮಾಡಿದ್ದಾರೆ ಎಂದು ಮೆಘಲಿ ದೂರು ನೀಡಿದ್ದಾರೆ. ಈ ಕುರಿತು ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)