varthabharthi


ಕರಾವಳಿ

ಕಡಬ: ಆಟೋರಿಕ್ಷಾ ಢಿಕ್ಕಿ; ಪಾದಚಾರಿ ಮೃತ್ಯು, ಮತ್ತೋರ್ವರಿಗೆ ಗಾಯ

ವಾರ್ತಾ ಭಾರತಿ : 11 Sep, 2019

ಕಡಬ, ಸೆ.11. ಆಟೋರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟು, ಓರ್ವ ಗಾಯಗೊಂಡ ಘಟನೆ ಕಡಬ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಮುಂಭಾಗ ಬುಧವಾರ ರಾತ್ರಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಮಂಗಳೂರು ತಾಲೂಕಿನ ನರಿಂಗಾನ ಗ್ರಾಮದ ಮೊಂಟೆಪದವು ಸಮೀಪದ ಚಂದಹಿತ್ಲು ನಿವಾಸಿ ಅಬ್ಬಾಸ್ (53) ಎಂದು ಗುರುತಿಸಲಾಗಿದೆ.

ಇವರು ಬುಧವಾರ ಸಾಫ್ಟ್ ಡ್ರಿಂಕ್ ಪಿಕಪ್ ನಲ್ಲಿ ಕಡಬಕ್ಕೆ ಹೋಗಿದ್ದು, ಪಿಕಪ್ ವಾಹನ ದುರಸ್ತಿಯಿದ್ದ ಕಾರಣ ಗ್ಯಾರೇಜ್ ನಲ್ಲಿ ನಿಲ್ಲಿಸಿ ಊಟ ತರಲೆಂದು ತೆರಳುತ್ತಿದ್ದಾಗ ಆಟೋ ರಿಕ್ಷಾ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಅಬ್ಬಾಸ್ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ಹಾದಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)