varthabharthi

ಬೆಂಗಳೂರು

2022ರೊಳಗೆ 16 ಸಾವಿರ ಪೊಲೀಸ್ ಹುದ್ದೆ ಭರ್ತಿ: ಹೈಕೋರ್ಟ್‌ಗೆ ಹೇಳಿಕೆ

ವಾರ್ತಾ ಭಾರತಿ : 11 Sep, 2019

ಬೆಂಗಳೂರು, ಸೆ.11: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಪೊಲೀಸ್ ಹುದ್ದೆಗಳನ್ನು ಮಾರ್ಚ್ 2022ರೊಳಗೆ ಭರ್ತಿ ಮಾಡಲಾಗುವುದು ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ. 

ಈ ಕುರಿತು ಸುಪ್ರೀಂಕೋರ್ಟ್ ಆದೇಶದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಮುಹಮ್ಮದ್ ನವಾಝ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 16 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ರಾಜ್ಯ ಸರಕಾರ ತಿಳಿಸಿತು. ನ್ಯಾಯಪೀಠವು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)