varthabharthi

ಕರಾವಳಿ

‘ಗಿರಿಗಿಟ್’ ತುಳು ಚಲನಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆಯಾಜ್ಞೆ

ವಾರ್ತಾ ಭಾರತಿ : 12 Sep, 2019

ಮಂಗಳೂರು, ಸೆ.12: ಇತ್ತೀಚೆಗೆ ಬಿಡುಗಡೆಗೊಂಡು ನಗರದ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳುತ್ತಿರುವ ತುಳು ಚಲನಚಿತ್ರ ‘ಗಿರಿಗಿಟ್’ ಪ್ರದರ್ಶನ ಮಾಡದಂತೆ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯ ಗುರುವಾರ ತಡೆಯಾಜ್ಞೆ ವಿಧಿಸಿದೆ.

ಈ ಚಲನಚಿತ್ರದಲ್ಲಿ ನ್ಯಾಯವಾದಿಗಳನ್ನು ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ವಕೀಲರ ಸಂಘದ ವತಿಯಿಂದ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಸಿವಿಲ್ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಹರೀಶ್ ಗಿರಿಗಿಟ್ ಚಲನಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ವಿಧಿಸಿ ಆದೇಶಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)