varthabharthi

ರಾಷ್ಟ್ರೀಯ

ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ: ತ್ವರಿತ ವಿಚಾರಣೆಗೆ ನಕಾರ

ವಾರ್ತಾ ಭಾರತಿ : 12 Sep, 2019

ಹೊಸದಿಲ್ಲಿ, ಸೆ.12: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರವನ್ನು ಬೀಳಿಸಿದ್ದ ಅನರ್ಹ ಶಾಸಕರಿಗೆ ಸುಪ್ರೀಂಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ನ್ಯಾಯಾಲಯದ ಎಲ್ಲ ಪ್ರಕರಣಗಳು ಸರದಿಯ ಪ್ರಕಾರವೇ ನಡೆಸಲಾಗುತ್ತಿದೆ. ನಿಮ್ಮ ಸರದಿ ಬರುವವರೆಗೂ ಕಾಯಬೇಕು. ನೀವು ಹೇಳಿದಂತೆಯೇ ಅರ್ಜಿ ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾ. ಎನ್‌ವಿ ರಮಣ ನೇತೃತ್ವದ ದ್ವಿಸದಸ್ಯ ಪೀಠ ಹೇಳಿದೆ.

ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ನಿಗದಿಯಾಗಿದ್ದ ದಿನಾಂಕವನ್ನು ರದ್ದುಪಡಿಸಲಾಗಿತ್ತು. ರದ್ದು ಮಾಡಿದ್ದ ಸುಪ್ರೀಂಕೋರ್ಟ್ ಆದೇಶ ಪ್ರಶ್ನಿಸುತ್ತಾ 17 ಅನರ್ಹ ಶಾಸಕರ ಅರ್ಜಿಯನ್ನು ಪಟ್ಟಿಯಲ್ಲಿ ಕೈಬಿಡದಂತೆ ಹಿರಿಯ ವಕೀಲ ರಾಕೇಶ್ ದ್ವಿವೇದಿ ಮನವಿ ಮಾಡಿದರು. ಅನರ್ಹ ಶಾಸಕರ ಪರ ವಕೀಲರ ಮನವಿಗೆ ಸುಪ್ರೀಂಕೋರ್ಟ್ ಸ್ಪಂದಿಸಿಲ್ಲ. ಹೀಗಾಗಿ ಪ್ರಕರಣದ ವಿಚಾರಣೆ ನಡೆಯುವ ತನಕ ಯಾವ ತೀರ್ಪು ಬರಲಿದೆ ಎಂದು ಕಾದುನೋಡಬೇಕಾದ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಅನರ್ಹ ಶಾಸಕರು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಭಾರೀ ಆತಂಕಕ್ಕೀಡಾಗಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)