ಮಲ್ಪೆ, ಸೆ.14: ಮಲ್ಪೆ ತೊಟ್ಟಂ ನಿವಾಸಿ ಇಂಜಿನಿಯರ್ ಬಿ.ಚೆನ್ನಪ್ಪ ಸೆ.11 ರಂದು ಸ್ವಗೃಹದಲ್ಲಿ ನಿಧನರಾದರು.
ಇವರು ಲೋಕೋಪಯೋಗಿ ಇಲಾಖೆ ಮತ್ತು ಸರಕಾರಿ ಸ್ವಾಮ್ಯದ ಕಂಪೆನಿಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.