varthabharthi

ಕರಾವಳಿ

ಮನಪಾ ಆಯುಕ್ತರಾಗಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ನೇಮಕ

ವಾರ್ತಾ ಭಾರತಿ : 16 Sep, 2019

ಮಂಗಳೂರು, ಸೆ.16: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರನ್ನಾಗಿ ಹಿರಿಯ ಕೆಎಎಸ್ ಅಧಿಕಾರಿ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ಮನಪಾ ಆಯುಕ್ತರಾಗಿದ್ದ ಮುಹಮ್ಮದ್ ನಝೀರ್ ವರ್ಗಾವಣೆಯಿಂದ ತೆರವಾದ ಹುದ್ದೆಗೆ ಅಜಿತ್‌ ಕುಮಾರ್ ಅವರನ್ನು ನೇಮಕಗೊಳಿಸಲಾಗಿದೆ.
ಅಜಿತ್‌ ಕುಮಾರ್ ಈ ಮೊದಲು ಬೆಂಗಳೂರಿನ ಜಲಾನಯನ ಅಭಿವೃದ್ಧಿ ಇಲಾಖೆಯ ಅಪರ ನಿರ್ದೇಶಕ ಹಾಗೂ ಮುಖ್ಯ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)