varthabharthi

ಬೆಂಗಳೂರು

ಇಂದಿನಿಂದ ಭಾರತ ‘ಎ’ ದ.ಆಫ್ರಿಕಾ ಎರಡನೇ ಅನಧಿಕೃತ ಟೆಸ್ಟ್: ಗಮನ ಸೆಳೆಯಲಿರುವ ಗಿಲ್

ವಾರ್ತಾ ಭಾರತಿ : 16 Sep, 2019

ಮೈಸೂರು, ಸೆ.16: ಪ್ರವಾಸಿ ದಕ್ಷಿಣ ಆಫ್ರಿಕಾ ಎ ತಂಡವನ್ನು ಭಾರತ ಎ ತಂಡ ಮಂಗಳವಾರ ಇಲ್ಲಿ ಆರಂಭವಾಗಲಿರುವ ಎರಡನೇ ಅನಧಿಕೃತ ಟೆಸ್ಟ್‌ನಲ್ಲಿ ಎದುರಿಸಲಿದೆ.

ಭಾರತದ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್ ಈ ಪಂದ್ಯದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.

ಆಫ್ರಿಕಾ ಎ ವಿರುದ್ಧ ಅನಧಿಕೃತ ಏಕದಿನ ಸರಣಿಯನ್ನು 4-1 ಅಂತರದಲ್ಲಿ ಜಯಿಸಿದ ಭಾರತ ಎ ತಂಡ ಮೊದಲ ಅನಧಿಕೃತ ಟೆಸ್ಟ್‌ನಲ್ಲಿ 7 ವಿಕೆಟ್‌ಗಳ ಅಂತರದಲ್ಲಿ ಜಯ ದಾಖಲಿಸಿತ್ತು. ಭಾರತ ಎ ತಂಡ ಇನ್ನೊಂದು ಪಂದ್ಯದಲ್ಲೂ ಜಯ ಗಳಿಸಿ ಸರಣಿಯನ್ನು 2-0 ಅಂತರದಲ್ಲಿ ವಶಪಡಿಸಿಕೊಳ್ಳುವ ಹಾದಿಯಲ್ಲಿದೆ.

19ರ ಹರೆಯದ ಗಿಲ್ ಅವರು ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿಗೆ ಅನಧಿಕೃತ ಟೆಸ್ಟ್‌ನಲ್ಲಿ ತಯಾರಿ ನಡೆಸುತ್ತಿದ್ದಾರೆ. ಅಕ್ಟೋಬರ್ 2ರಂದು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಮೊದಲ ಟೆಸ್ಟ್ ವಿಶಾಖಪಟ್ಟಣದಲ್ಲಿ ಆರಂಭಗೊಳ್ಳಲಿದೆ. ಮೊದಲ ಅನಧಿಕೃತ ಟೆಸ್ಟ್‌ನಲ್ಲಿ ಗಿಲ್ ನಾಯಕನಾಗಿ 90 ರನ್ ಸಿಡಿಸಿದ್ದರು. ಎರಡನೇ ಟೆಸ್ಟ್‌ನಲ್ಲಿ ಭಾರತ ಎ ತಂಡವನ್ನು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ವೃದ್ದಿಮಾನ್ ಸಹಾ ಮುನ್ನಡೆಸುವರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)