varthabharthi

ನಿಧನ

ಮಹಮ್ಮದ್ ಫೈಝಿ

ವಾರ್ತಾ ಭಾರತಿ : 17 Sep, 2019

ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಮಚ್ಚಿಮಲೆ ನಿವಾಸಿ ಉದ್ದಬೆಟ್ಟು ಮಸೀದಿಯ ಸಹಾಯಕ ಧರ್ಮಗುರು ಮಹಮ್ಮದ್ ಫೈಝಿ ಅವರು ಹೃದಯಾಘಾತದಿಂದ ಸೋಮವಾರ ರಾತ್ರಿ ನಿಧನರಾದರು. 

ಉದ್ದಬೆಟ್ಟು ಮಸೀದಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅಲ್ಲಿ ರಾತ್ರಿ ವೇಳೆಗೆ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅವರನ್ನು ತುಂಬೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ವೇಳೆಗೆ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. 

ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯರನ್ನು ಅಗಲಿದ್ದಾರೆ. ಮೃತರ ಧಫನ ಕಾರ್ಯ ಮಂಗಳವಾರ ಪರ್ಲಡ್ಕ ಮುಹಿಯುದ್ದೀನ್ ಜುಮ್ಮಾ ಮಸೀದಿ ವಠಾರದಲ್ಲಿ ನಡೆಯಿತು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)