varthabharthi

ಮಾಹಿತಿ - ಮಾರ್ಗದರ್ಶನ

ಕುವೆಂಪು ವಿಶ್ವವಿದ್ಯಾಲಯ ದೂರಶಿಕ್ಷಣ ಅರ್ಜಿ ಆಹ್ವಾನ

ವಾರ್ತಾ ಭಾರತಿ : 18 Sep, 2019

ಮೂಡುಬಿದಿರೆ: ಕುವೆಂಪು ವಿಶ್ವವಿದ್ಯಾಲಯ ದೂರಶಿಕ್ಷಣ ಕೇಂದ್ರದ 2019-20ರ ಶೈಕ್ಷಣಿಕ ವರ್ಷದ ಸ್ನಾತಕ, ಸ್ನಾತಕೋತ್ತರ ಕೋರ್ಸ್‍ಗಳಿಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬಿ.ಎ., ಬಿ.ಕಾಂ., ಬಿ.ಎಸ್.ಸಿ., ಬಿ.ಬಿ.ಎ. , ಬಿ.ಎಲ್.ಐ.ಎಸ್.ಸಿ., ಎಂ.ಎಲ್.ಐ.ಎಸ್.ಸಿ., ಎಂ.ಎ., ಎಂ.ಕಾಂ., ಎಂ.ಎಸ್.ಸಿ. ಹಾಗೂ ಒಂದು ವರ್ಷದ ಪಿಜಿ ಡಿಪ್ಲೋಮಾಗೆ ಕೇಂದ್ರದ ಮೂಲಕ ಪ್ರವೇಶಾತಿ ಪಡೆದುಕೊಳ್ಳಬಹುದು.

ಆಸಕ್ತರು ಆಡಳಿತ ಕಚೇರಿಯಲ್ಲಿ ಅರ್ಜಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೇ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ ಸಹ ಆಡಳಿತಾಧಿಕಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದೂ.ಸಂ:08258-261274 ಹಾಗೂ 7090715010  ಸಂಪರ್ಕಿಸುವಂತೆ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)