ಟೆಸ್ಟ್ ಕ್ರಿಕೆಟ್ನಿಂದ ವಿರಾಮ ಪಡೆದ ಮೊಯಿನ್ ಅಲಿ
ಲಂಡನ್, ಸೆ.21: ಕಳಪೆ ಫಾರ್ಮ್ನಲ್ಲಿದ್ದ ಕಾರಣ 2019-20ರ ಋತುವಿನಲ್ಲಿ ಟೆಸ್ಟ್ ಕ್ರಿಕೆಟ್ನ ಕೇಂದ್ರೀಯ ಗುತ್ತಿಗೆ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಇಂಗ್ಲೆಂಡ್ ಆಲ್ರೌಂಡರ್ ಮೊಯಿನ್ ಅಲಿ ಟೆಸ್ಟ್ ಕ್ರಿಕೆಟ್ನಿಂದ ವಿರಾಮ ಪಡೆಯಲು ನಿರ್ಧರಿಸಿದ್ದಾರೆ.
32ರ ಹರೆಯದ ಆಫ್-ಸ್ಪಿನ್ನರ್ ಹಾಗೂ ಎಡಗೈ ಬ್ಯಾಟ್ಸ್ಮನ್ ಅಲಿ ವಿಶ್ವಕಪ್ ವಿಜೇತ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಕಳೆದುಕೊಂಡಿದ್ದರು. ಆಸ್ಟ್ರೇಲಿಯ ವಿರುದ್ಧ ಆ್ಯಶಸ್ ಸರಣಿಯ ಮೊದಲ ಪಂದ್ಯದ ಬಳಿಕ ಟೆಸ್ಟ್ ತಂಡದಲ್ಲೂ ಸ್ಥಾನ ಕಳೆದುಕೊಂಡಿದ್ದರು.
ಅಲಿ 60 ಟೆಸ್ಟ್, 101 ಏಕದಿನ ಹಾಗೂ 25 ಟ್ವೆಂಟಿ-20 ಅಂತರ್ರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂರು ಮಾದರಿಯಲ್ಲಿ 8 ಶತಕಗಳನ್ನು ಗಳಿಸಿದ್ದಲ್ಲದೆ 280 ವಿಕೆಟ್ಗಳನ್ನು ಉರುಳಿಸಿದ್ದಾರೆ.
ಇದೇ ವೇಳೆ, ಅಲಿ ಟ್ವೆಂಟಿ-20 ಕ್ರಿಕೆಟ್ನಲ್ಲಿ ತನ್ನ ಗುತ್ತಿಗೆಯನ್ನು ಉಳಿಸಿಕೊಂಡಿದ್ದಾರೆ. ಮುಂದಿನ ವರ್ಷ ಆಸ್ಟ್ರೇಲಿಯದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಅಭಿಯಾನದಲ್ಲಿ 50 ಓವರ್ಗಳ ಚಾಂಪಿಯನ್ ಇಂಗ್ಲೆಂಡ್ ಉತ್ತಮ ಸಾಧನೆ ಮಾಡಲು ಅಲಿ ಪ್ರಮುಖ ಪಾತ್ರವಹಿಸುವ ಸಾಧ್ಯತೆಯಿದೆ.