varthabharthi

ಕರಾವಳಿ

ಸೆ.29ರಿಂದ ಮಂಗಳೂರು ದಸರಾ

ವಾರ್ತಾ ಭಾರತಿ : 22 Sep, 2019

ಮಂಗಳೂರು, ಸೆ.22: ವೈಭವದ ಮಂಗಳೂರು ದಸರಾ ಮಹೋತ್ಸವವು ಇದೇ ಸೆ.29ರಿಂದ ಅಕ್ಟೋಬರ್ 9ರ ಬೆಳಗ್ಗಿನವರೆಗೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಮಂಗಳೂರು ದಸರಾ ಸಂದರ್ಭ ನಡೆಯುವ ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಟ್ಯಾಬ್ಲೋ ಪ್ರವರ್ತಕರ ಸಭೆಯು ಇದೇ ಸೆ.25ರಂದು ಸಂಜೆ 5ಗಂಟೆಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ದಸರಾ ಮಹೋತ್ಸವದ ವೈಭವವವನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಆಗಮಿಸುತ್ತಿದ್ದು, ದಸರಾ ಮೆರವಣಿಗೆಯಲ್ಲಿ ಟ್ಯಾಬ್ಲೋಗಳು ವಿಶೇಷ ಆಕರ್ಷಣೆಯಾಗಿವೆ. ಈ ಬಾರಿಯ ಮೆರವಣಿಗೆಯ ಬಗ್ಗೆ ಮಾತುಕತೆ ನಡೆಸಲು ಟ್ಯಾಬ್ಲೋಗಳ ಮುಖ್ಯಸ್ಥರ ಸಭೆಯನ್ನು ನಡೆಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಟ್ಯಾಬ್ಲೋಗಳ ಮುಖ್ಯಸ್ಥರು ಭಾಗವಹಿಸಿ ತಮ್ಮ ಸಲಹೆ ಸೂಚನೆ ನೀಡುವುದರೊಂದಿಗೆ ದಸರಾ ಮಹೋತ್ಸವ ಯಶಸ್ಸಿಗೆ ಸಹಕರಿಸಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟನೆಯಲ್ಲಿ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)