varthabharthi

ಕರಾವಳಿ

ಮಂಗಳೂರು: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಎಎಸ್ಸೈ

ವಾರ್ತಾ ಭಾರತಿ : 23 Sep, 2019

ಮಂಗಳೂರು, ಸೆ.23: ಮಂಗಳೂರು ಪೊಲೀಸ್ ಕಮಿಷನರೇಟ್‌ನ ಎಎಸ್ಸೈವೊಬ್ಬರು ನಗರದ ಲಾಡ್ಜ್‌ವೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.

ಮಂಗಳೂರು ಪಶ್ಚಿಮ ಠಾಣಾ ಎಎಸ್ಸೈ ನವೀನ್ (45) ಆತ್ಮಹತ್ಯೆಗೆ ಯತ್ನಿಸಿದವರು ಎಂದು ತಿಳಿದುಬಂದಿದೆ.

ಸೋಮವಾರ ಮಧ್ಯಾಹ್ನ ಮಂಗಳೂರು ನಗರದ ಲಾಡ್ಜ್‌ವೊಂದರ ರೂಮಿನಲ್ಲಿ ವಿಷ ಪದಾರ್ಥ ಸೇವಿಸಿದ್ದಾರೆ. ಇದನ್ನು ನೋಡಿದ ರೂಮ್‌ಬಾಯ್ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಬಂದರ್ ಠಾಣಾ ಪೊಲೀಸರು ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಕುರಿತು ಮಂಗಳೂರು ಉತ್ತರ (ಬಂದರ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)