varthabharthi

ಮಾಹಿತಿ - ಮಾರ್ಗದರ್ಶನ

ಮಂಗಳೂರು: ಉಚಿತ ಕಂಪ್ಯೂಟರ್ ತರಬೇತಿ

ವಾರ್ತಾ ಭಾರತಿ : 24 Sep, 2019

ಮಂಗಳೂರು, ಸೆ.24: ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಅಕ್ಟೋಬರ್ 10ರಿಂದ ನವೆಂಬರ್ 24ರವರೆಗೆ ಉಚಿತ ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕಿಂಗ್ ತರಬೇತಿ ಕಾರ್ಯಕ್ರಮ ನಡೆಯಲಿದೆ.

 ಈ ಕ್ಷೇತ್ರದಲ್ಲಿ ಸ್ವ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ಅಕ್ಟೋಬರ್ 5 ರಂದು ರುಡ್‌ಸೆಟ್ ಸಂಸ್ಥೆಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ತರಬೇತಿ ಪಡೆಯಲು 18 ರಿಂದ 45 ವರ್ಷಗಳ ವಯೋಮಿತಿ, ಕನ್ನಡ ಓದು ಬರಹ ಬಲ್ಲ ಯುವಕರು ಸಂಸ್ಥೆಯ ಅರ್ಜಿ ನಮೂನೆಯಲ್ಲಿ ಅಥವಾ ಬಿಳಿ ಹಾಳೆಯಲ್ಲಿ ಭರ್ತಿ ಮಾಡಿ ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ 574 240, ಬೆಳ್ತಂಗಡಿ ತಾಲೂಕು ಇವರಿಗೆ ಕಳುಸಬಹುದು ಅಥವಾ ಸಂಸ್ಥೆಯ ವೆಬ್‌ಸೈಟ್ (www.rudsetujire.com)ಮೂಲಕ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.ಸಂಖ್ಯೆ 08256-236404ಗೆ ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)