varthabharthi

ಮಾಹಿತಿ - ಮಾರ್ಗದರ್ಶನ

ವೆನ್‌ಲಾಕ್‌ನಲ್ಲಿ ವಿವಿಧ ಹುದ್ದೆಗೆ ನೇರ ಸಂದರ್ಶನ

ವಾರ್ತಾ ಭಾರತಿ : 24 Sep, 2019

ಮಂಗಳೂರು, ಸೆ.24: ದ.ಕ.ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಡಿಎನ್‌ಬಿ ಕೋರ್ಸ್‌ಗಳು ಆರಂಭವಾಗಲಿದ್ದು, ಪಿ.ಜಿ ಟೀಚರ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಕೊಳ್ಳಲು ನೇರ ಸಂದರ್ಶನ ನಡೆಸಲಾಗುವುದು. ಆಸಕ್ತ ತಜ್ಞರು, ವೈದ್ಯರು ಸಂಬಂಧಿಸಿದ ಅಗತ್ಯ ದಾಖಲಾತಿಗಳೊಂದಿಗೆ ಅಕ್ಟೋಬರ್ 10ರಂದು ಪೂರ್ವಾಹ್ನ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.

 ಪೀಡಿಯಾಟ್ರಿಕ್ ಸರ್ಜರಿ, ಯುರೋಲೊಜಿ, ಇಮ್ಯುನೋ ಹೆಮಿಟೋಲೊಜಿ ಮತ್ತು ಟ್ರಾನ್ಸ್‌ಫ್ಯುಷನ್ ಈ ವಿಭಾಗದಲ್ಲಿ ತಲಾ ಒಂದೊಂದು ಹುದ್ದೆ ಖಾಲಿ ಇದೆ. ಮಾಹಿತಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರ ಕಚೇರಿ, ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು. ದೂ.ಸಂ: 0824-24313250, 2421351 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)