varthabharthi

ಕ್ರೀಡೆ

ಹಾರ್ದಿಕ್ ಪಾಂಡ್ಯಗೆ ಲಂಡನ್‌ನಲ್ಲಿ ಯಶಸ್ವಿ ಸರ್ಜರಿ

ವಾರ್ತಾ ಭಾರತಿ : 5 Oct, 2019

ಹೊಸದಿಲ್ಲಿ, ಅ.5: ಭಾರತದ ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಲಂಡನ್‌ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಬೆನ್ನುನೋವಿನಿಂದ ಬಳಲುತ್ತಿದ್ದ ಅವರು ಇನ್ನೂ ಕೆಲವು ಸಮಯ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ.

‘‘ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿದೆ. ನನಗೆ ಶುಭ ಹಾರೈಸಿದ ಪ್ರತಿಯೊಬ್ಬರಿಗೂ ಚಿರ ಋಣಿಯಾಗಿದ್ದೇನೆ. ಯಾವಾಗ ವಾಪಸ್ ಬರುತ್ತೇನೆಂದು ಗೊತ್ತಿಲ್ಲ. ಅಲ್ಲಿಯ ತನಕ ನಿಮ್ಮೆನ್ನೆಲ್ಲಾ ಮಿಸ್ ಮಾಡಿಕೊಳ್ಳುತ್ತೇನೆ’’ ಎಂದು ಟ್ವೀಟ್ ಮಾಡಿದ್ದಾರೆ. ಹಾರ್ದಿಕ್‌ಗೆ ಕಳೆದ ವರ್ಷದ ಸೆಪ್ಟಂಬರ್‌ನಲ್ಲಿ ನಡೆದ ಏಶ್ಯಕಪ್ ವೇಳೆ ಬೆನ್ನುನೋವು ಕಾಣಿಸಿಕೊಂಡಿತ್ತು. ಐಪಿಎಲ್ ಹಾಗೂ ವಿಶ್ವಕಪ್ ವೇಳೆ ಚೇತರಿಸಿಕೊಂಡಿದ್ದ ಪಾಂಡ್ಯಗೆ ಮತ್ತೆ ಬೆನ್ನುನೋವು ಕಾಣಿಸಿಕೊಂಡಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)