ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಶತಕ: ರೋಹಿತ್ ಶರ್ಮ ಅಪರೂಪದ ಸಾಧನೆ
ವಿಶಾಖಪಟ್ಟಣ, ಅ. 5: ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ ಭಾರತ ಕ್ರಿಕೆಟ್ ತಂಡದ ಆರಂಭಿಕ ದಾಂಡಿಗ ರೋಹಿತ್ ಶರ್ಮ, 41 ವರ್ಷದ ಹಿಂದಿನ ಸುನಿಲ್ ಗವಾಸ್ಕರ್ ಸಾಧನೆಯನ್ನು ಸರಿಗಟ್ಟಿದ್ದಾರೆ.
1978-79ರ ಸರಣಿಯಲ್ಲಿ ಭಾರತ ತಂಡದ ಆರಂಭಿಕ ದಾಂಡಿಗ ಸುನಿಲ್ ಗವಾಸ್ಕರ್ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ದಾಖಲಿಸಿದ್ದರು. ಇದೀಗ ಪ್ರವಾಸಿ ದಕ್ಷಿಣ ಆಫ್ರಿಕಾ ಎದುರು ನಡೆಯುತ್ತಿರುವ ಕ್ರಿಕೆಟ್ ಸರಣಿಯ ಪ್ರಥಮ ಪಂದ್ಯದಲ್ಲಿ ಆರಂಭಿಕ ದಾಂಡಿಗನಾಗಿ ಕಣಕ್ಕಿಳಿದ ರೋಹಿತ್ ಪ್ರಥಮ ಇನ್ನಿಂಗ್ಸ್ ನಲ್ಲಿ 176 ಮತ್ತು ದ್ವಿತೀಯ ಇನ್ನಿಂಗ್ಸ್ ನಲ್ಲಿ ಮತ್ತೆ ಶತಕ ಸಿಡಿಸಿ, ಆರಂಭಿಕ ದಾಂಡಿಗನಾಗಿ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ನಲ್ಲಿ ಶತಕ ಬಾರಿಸಿದ ಅಪರೂಪದ ಸಾಧನೆ ಸರಿಗಟ್ಟಿದ್ದಾರೆ.
Next Story