varthabharthi

ಅಂತಾರಾಷ್ಟ್ರೀಯ

“ಕಾಶ್ಮೀರಿಗಳ ಹಕ್ಕುಗಳನ್ನು ಗೌರವಿಸಬೇಕು”

ಜಮ್ಮು ಕಾಶ್ಮೀರದ ನಿರ್ಬಂಧಗಳ ಬಗ್ಗೆ ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ವಾರೆನ್ ಕಳವಳ

ವಾರ್ತಾ ಭಾರತಿ : 5 Oct, 2019

ಹೊಸದಿಲ್ಲಿ, ಅ.5: ಜಮ್ಮು ಮತ್ತು ಕಾಶ್ಮೀರದಲ್ಲಿ ಹೇರಲಾಗಿರುವ ಸಂವಹನ ನಿರ್ಬಂಧದ ಬಗ್ಗೆ ಅಮೆರಿಕದ ಸೆನೆಟರ್ ಮತ್ತು ಅಮೆರಿಕದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿ ಎಲಿಝಬೆತ್ ವಾರೆನ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

“ಭಾರತ-ಅಮೆರಿಕದ ಸಂಬಂಧಗಳು ನಮ್ಮ ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ಬೇರೂರಿದೆ. ಸಂಪರ್ಕದ ಮೇಲಿನ ನಿರ್ಬಂಧ ಮತ್ತು ಇತರ ನಿರ್ಬಂಧಗಳು ಸೇರಿ ಕಾಶ್ಮೀರದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಘಟನೆಗಳಿಂದ ಆತಂಕಿತಳಾಗಿದ್ದೇನೆ. ಕಾಶ್ಮೀರದ ಜನರ ಹಕ್ಕುಗಳನ್ನು ಗೌರವಿಸಬೇಕು” ಎಂದವರು ಟ್ವೀಟ್ ಮಾಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)