varthabharthi

ಬೆಂಗಳೂರು

ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

ವಾರ್ತಾ ಭಾರತಿ : 5 Oct, 2019

ಬೆಂಗಳೂರು, ಅ.5: ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಇಲ್ಲಿನ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಕಲ್ಲಸಂದ್ರದ ಅಭಿಷೇಕ್(23) ಮೃತ ವಿದ್ಯಾರ್ಥಿಯಾಗಿದ್ದು, ಘಟನೆಯಲ್ಲಿ ಗಾಯಗೊಂಡಿರುವ ಸಾಹಿಲ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಗೇರಿ ಬಳಿಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಅಭಿಷೇಕ್ ಶುಕ್ರವಾರ ಮಧ್ಯಾಹ್ನ 2ರ ವೇಳೆ ಪಟ್ಟಣಗೆರೆಯಿಂದ ಗ್ಲೋಬಲ್ ವಿಲೇಜ್ ಕಡೆಗೆ ಹೋಗುವ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಕಾರು, ಬೈಕ್‌ಗೆ ಅಪ್ಪಳಿಸಿದೆ ಎನ್ನಲಾಗಿದೆ.

ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಅಭಿಷೇಕ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟರೆ, ಸಾಹಿಲ್ ಗಾಯಗೊಂಡಿದ್ದಾರೆ. ಪ್ರಕರಣ ದಾಖಲಿಸಿರುವ ಕೆಂಗೇರಿ ಸಂಚಾರ ಪೊಲೀಸರು, ಕಾರು ಚಾಲಕನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)