varthabharthi


ಬೆಂಗಳೂರು

ಕ್ಷೇತ್ರದಿಂದ ಕಾಲ್ಕಿತ್ತಿರುವ ಸಂಸದೆ ಶೋಭಾ: ಮಾಜಿ ಸಿಎಂ ಕುಮಾರಸ್ವಾಮಿ

ವಾರ್ತಾ ಭಾರತಿ : 7 Oct, 2019

ಬೆಂಗಳೂರು, ಅ. 7: ‘ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಹ ಬಂದು ಸಾವಿರಾರು ಕುಟುಂಬಗಳ ಬದುಕು ಡೋಲಾಯಮಾನವಾಗಿದೆ. ನೆರೆ ಪರಿಹಾರ ಸಿಗುತ್ತಿಲ್ಲ ಎಂದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಕ್ಷೇತ್ರದ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರು ಅವರೊಂದಿಗಿದ್ದು ಧೈರ್ಯ ತುಂಬುವ ಕೆಲಸ ಮಾಡುವ ಬದಲು ಕ್ಷೇತ್ರದಿಂದ ಕಾಲ್ಕಿತ್ತಿರುವುದು ಅವರ ‘ರೈತಪರ ಕಾಳಜಿ’ಯನ್ನು ಎತ್ತಿತೋರಿಸುತ್ತದೆ’ ಎಂದು ಟ್ವಿಟ್ಟರ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)