varthabharthi

ಕರ್ನಾಟಕ

ವಿಪಕ್ಷ ನಾಯಕನ ಸ್ಥಾನಕ್ಕಾಗಿ ದುಂಬಾಲು ಬೀಳುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾ ಭಾರತಿ : 7 Oct, 2019

ಬೆಂಗಳೂರು, ಅ. 7: ‘ವಿಧಾನಸಭೆ ಪ್ರತಿಪಕ್ಷದ ನಾಯಕ ಸ್ಥಾನಕ್ಕಾಗಿ ನಾನು ಯಾವುದೇ ಕಾರಣಕ್ಕೂ ಪಕ್ಷದ ಹೈಕಮಾಂಡ್‌ಗೆ ದುಂಬಾಲು ಬೀಳುವುದಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ನಗರದಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಕ್ಷಕ್ಕೆ ನನ್ನ ಅಗತ್ಯವಿದ್ದರೆ ವಿಪಕ್ಷ ನಾಯಕನ ಸ್ಥಾನವನ್ನು ನೀಡುತ್ತಾರೆ. ಪಕ್ಷಕ್ಕೆ ನನ್ನ ಅಗತ್ಯವಿಲ್ಲದಿದ್ದರೆ ಬೇರೆಯವರಿಗೆ ಪ್ರತಿಪಕ್ಷ ನಾಯಕ ಸ್ಥಾನವನ್ನು ನೀಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೇ ವಿಧಾನಸಭೆ ವಿರೋಧ ಪಕ್ಷದ ನಾಯಕರು ಆಗಿರಬೇಕು. ಎರಡೂ ಹುದ್ದೆಗಳನ್ನು ಒಬ್ಬರೇ ಇದ್ದರೆ ಸೂಕ್ತ ಎಂದು ನನ್ನ ಸ್ಪಷ್ಟ ಅಭಿಪ್ರಾಯವನ್ನು ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)