varthabharthi

ಕರ್ನಾಟಕ

2009ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಬಿಜೆಪಿ ಸರ್ಕಾರಕ್ಕೆ ಎಷ್ಟು ಕೊಟ್ಟಿತ್ತು: ಬಸವರಾಜ್ ಬೊಮ್ಮಾಯಿ

ವಾರ್ತಾ ಭಾರತಿ : 8 Oct, 2019

ದಾವಣಗೆರೆ: ಯುಪಿಎ ಸರಕಾರದ ಅವಧಿಯಲ್ಲಿ ಅಂದಿನ ಸರಕಾರ 17 ಸಾವಿರ ಕೋಟಿ ಕೇಳಿತ್ತು ಆದರೆ ಕೊಟ್ಟಿದ್ದು ಬರಿ 700 ಕೋಟಿ ಮಾತ್ರ ಇದರ ಬಗ್ಗೆ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ವ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಪಕ್ಷಗಳ ವಿರುದ್ದ ಹರಿಹಾಯ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2009ರಲ್ಲಿ ಮನಮೋಹನ್ ಸಿಂಗ್ ಸರ್ಕಾರ ಬಿಜೆಪಿ ಸರ್ಕಾರಕ್ಕೆ ಎಷ್ಟು ಕೊಟ್ಟಿತ್ತು ಎಂಬುದು ಸಿದ್ದರಾಮಯ್ಯರಿಗೆ ಗೊತ್ತಿಲ್ವ. ವಿರೋಧ ಪಕ್ಷದವರ ಅಜೆಂಡ ಏನೂ ಗೊತ್ತಿಲ್ಲ. ಖಜಾನೆ ಖಾಲಿಯಾಗಿದೆ ಎಂಬ ಪ್ರಶ್ನೆಯೇ ಇಲ್ಲಾ. ಸಾರಿಗೆ ನಿಗಮದ್ದು ಹಲವಾರು ವರ್ಷಗಳ ಸಮಸ್ಯೆಯಿದೆ ಆ ಕಾರಣಕ್ಕೆ ಬಾಕಿ ಆಗಿದೆ. ವಿವಿಧ ಕೆಲಸಗಳನ್ನು ಮಾಡಲು ಯಾವುದೇ ತೊಂದರೆ ಇಲ್ಲ. ಔರಾದ್ಕರ ವರದಿ ಜಾರಿ ಮಾಡುತ್ತೇವೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದರು.

ಪೊಲೀಸರಿಗೆ ನಾಲ್ಕನೇ ರಜೆ ದಿನದ ಬಗ್ಗೆ ಚರ್ಚೆ ನಡೆಯುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ 14 ತಿಂಗಳು ಹೇಗೆ ಅಧಿಕಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಲೇವಡಿ ಮಾಡಿದರು. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)