varthabharthi

ಕರ್ನಾಟಕ

ಬನ್ನಿ ಮರಕ್ಕೆ ಸಂಪ್ರದಾಯವಾಗಿ ವಿಶೇಷ ಪೂಜೆ ಸಲ್ಲಿಸಿದ ರಾಜವಂಶಸ್ಥ ಯದುವೀರ್

ವಾರ್ತಾ ಭಾರತಿ : 8 Oct, 2019

ಮೈಸೂರು,ಅ.8: ಮೈಸೂರು ಅರಮನೆಯಲ್ಲಿ ಮಂಗಳವಾರ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿದರು.

ಅರಮನೆಯ ಉತ್ತರ ದಿಕ್ಕಿನಲ್ಲಿರುವ ಭುವನೇಶ್ವರಿ ಅಮ್ಮನವರ ದೇಗುಲದ ಆವರಣಕ್ಕೆ ವಿಜಯಯಾತ್ರೆ ಹೊರಟ ಯದುವೀರ್ ಅವರು ಬನ್ನಿ ಮರಕ್ಕೆ ಸಂಪ್ರದಾಯಬದ್ದವಾಗಿ ವಿಶೇಷ ಪೂಜೆ ಸಲ್ಲಿಸಿದರು.

ಚಾಮುಂಡಿಬೆಟ್ಟದಿಂದ ತರಲಾದ ತಾಯಿ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಅರಮನೆ ಆವರಣದಲ್ಲಿ ರಾಜವಂಶಸ್ಥ ಯದುವೀರ್ ಅವರು ವಿಶೇಷ ಪೂಜೆ ಸಲ್ಲಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)