ಪಡುಬಿದ್ರೆ, ಅ.8: ನಿವೃತ್ತ ಶಿರಸ್ತೇದಾರ್ ಬಾಬು ಪಲಿಮಾರು(68) ಎಂಬವರು ಅ.8ರಂದು ಪಲಿಮಾರುವಿನ ಸ್ವಗೃಹದಲ್ಲಿ ನಿಧನರಾದರು.
ಮೃತರು ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಶಿರಸ್ತೆದಾರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.