varthabharthi

ಕರ್ನಾಟಕ

ದಕ್ಷಿಣ ಭಾರತದಲ್ಲೂ ಖಾಸಗಿ ರೈಲು: ಸುರೇಶ್ ಅಂಗಡಿ

ವಾರ್ತಾ ಭಾರತಿ : 8 Oct, 2019

ಬೆಳಗಾವಿ, ಅ.8: ದಕ್ಷಿಣ ಭಾರತ ಭಾಗದಲ್ಲೂ ಖಾಸಗಿ ರೈಲು ಸಂಚಾರಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ರಾಜ್ಯ ಸಚಿವ ಸುರೇಶ್ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಭಾರತದಲ್ಲಿ ದೆಹಲಿ-ಲಕ್ನೋ ಮಧ್ಯೆ ಖಾಸಗಿ ರೈಲು ಆರಂಭವಾಗಿದೆ. ಇದೇ ಮಾದರಿಯಲ್ಲಿ ದಕ್ಷಿಣ ಭಾರತದಲ್ಲೂ ಖಾಸಗಿ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುವುದು. ಅಷ್ಟೇ ಅಲ್ಲದೆ, ಆಸಕ್ತರೊಂದಿಗೆ ರೈಲ್ವೆ ಇಲಾಖೆ ಕೈಜೋಡಿಸಲಿದೆ ಎಂದರು.

ಪ್ರವಾಹ ಸಂಬಂಧ ಕೇಂದ್ರ ಸರಕಾರ ರಾಜ್ಯಕ್ಕೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ನಾಯಕರ ಮನವಿಗೆ ಕೇಂದ್ರ ಸರಕಾರ ಸ್ಪಂದಿಸಿದೆ ಎಂದ ಅವರು, ಆರಂಭಿಕವಾಗಿ ತುರ್ತು 10 ಸಾವಿರ, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಶೀಘ್ರದಲ್ಲಿಯೇ ಕೇಂದ್ರದಿಂದ ಹೆಚ್ಚಿನ ಪರಿಹಾರ ಬಿಡುಗಡೆ ಆಗಲಿದೆ ಎಂದು ಸುರೇಶ್ ಅಂಗಡಿ ಎಂದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)