varthabharthi

ಕರ್ನಾಟಕ

ಕಲಬುರ್ಗಿ: ರಸ್ತೆ ಅಪಘಾತ; ಮೂವರು ಮೃತ್ಯು

ವಾರ್ತಾ ಭಾರತಿ : 8 Oct, 2019

ಕಲಬುರ್ಗಿ, ಅ.8: ಶರವೇಗದಲ್ಲಿ ಸಾಗುತ್ತಿದ್ದ ಕಾರೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಇಲ್ಲಿನ ಚಿಂಚೋಳಿ ಹೊರವಲಯದ ಮೈಲಾರಲಿಂಗ ದೇವಸ್ಥಾನ ಬಳಿ ನಡೆದಿದೆ ಎಂದು ವರದಿಯಾಗಿದೆ.

ಚಿಂಚೋಳಿ ತಾಲೂಕಿನ ಗಡಿಕೇಶ್ವರ ಗ್ರಾಮದ ಕಾರು ಚಾಲಕ ಶಕೀಲ್ ಬಾಬು(41) ಹಾಗೂ ದೇಗಲಮಡಿ ಗ್ರಾಮದ ಬೈಕ್ ಸವಾರ ಮಲ್ಲಪ್ಪ(23) ಎಂಬುವರು ಸ್ಥಳದಲ್ಲಿಯೇ ಮೃತಪಟ್ಟರೆ, ನಾಸೀರ್ ಎಂಬಾತ ಚಿಕಿತ್ಸೆ ಫಲಕಾರಿಯಾಗದೆ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳವಾರ ಹೈದರಾಬಾದ್‌ನಿಂದ ಗಡಿಕೇಶ್ವರ ಗ್ರಾಮಕ್ಕೆ ಹೊರಟಿದ್ದ ಕಾರು, ಚಿಂಚೋಳಿಯಿಂದ ದೇಗಲಮಡಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)