varthabharthi

ಬೆಂಗಳೂರು

ಬೆಂಗಳೂರು: ಟೆಕ್ಕಿ ಮೇಲೆ ಹಲ್ಲೆ ಆರೋಪ

ವಾರ್ತಾ ಭಾರತಿ : 8 Oct, 2019

ಬೆಂಗಳೂರು, ಅ.8: ಹಣದ ವಿಚಾರವಾಗಿ ಖಾಸಗಿ ಕಾರು ಚಾಲಕನೋರ್ವ ಸಾಫ್ಟ್‌ವೇರ್ ಇಂಜಿನಿಯರ್ ಮೇಲೆ ಹಲ್ಲೆ ಮಾಡಿದ ಪ್ರಕರಣ ನಗರದ ಹೊರ ವಲಯದಲ್ಲಿ ನಡೆದಿದೆ. ನಗರದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅನೀಕ್ ರಾಯ್ ಹೂಡಿಯಿಂದ ಕೆಂಪೇಗೌಡ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕ್ಯಾಬ್ ಬುಕ್ ಮಾಡಿದ್ದು, ಬುಕ್ ಮಾಡಿದ್ದಕ್ಕಿಂತ ಹೆಚ್ಚಿನ ಹಣವನ್ನು ಚಾಲಕ ಕೇಳಿದ್ದನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಈ ವಿಚಾರವಾಗಿ ಜಗಳ ಉಂಟಾಗಿ ಚಾಲಕ, ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್ 323(ಹಲ್ಲೆ), 341(ಸಂಯಮ ಕಳೆದು ಕೊಂಡಿರುವುದು), 504 (ಉದ್ದೇಶಪೂರ್ವಕವಾಗಿ ಅವಮಾನ ಮಾಡಿರುವುದು) ಅಡಿ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)