varthabharthi

ಕರ್ನಾಟಕ

ವಿಪಕ್ಷ ನಾಯಕನ ಆಯ್ಕೆ ಬಗ್ಗೆ ಎಚ್.ಕೆ.ಪಾಟೀಲ್ ಹೇಳಿದ್ದೇನು?

ವಾರ್ತಾ ಭಾರತಿ : 9 Oct, 2019

ಬೆಳಗಾವಿ, ಅ.9: ಕಾಂಗ್ರೆಸ್ ಪಕ್ಷದಲ್ಲಿ ಮೂಲ, ವಲಸಿಗ ಎನ್ನುವ ಭಾವನೆ ಇಲ್ಲ. ವಿರೋಧ ಪಕ್ಷದ ನಾಯಕನ ಆಯ್ಕೆ ಸಂಬಂಧ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಎಂದು ಶಾಸಕ ಎಚ್.ಕೆ.ಪಾಟೀಲ್ ಹೇಳಿದರು.

ಬುಧವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಪಕ್ಷ ನಾಯಕ ಆಯ್ಕೆ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕ ಮಧುಸೂದನ್ ಮಿಸ್ತ್ರಿ ಎಲ್ಲರಿಂದ ಮಾಹಿತಿ ಪಡೆದು ವರದಿಯನ್ನು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ತಲುಪಿಸಿದ್ದಾರೆ ಎಂದರು.

ಬುಧವಾರ ಸಂಜೆಯೊಳಗೆ ಪ್ರತಿಪಕ್ಷ ನಾಯಕ ಘೋಷಣೆ ಆಗುವ ಸಾಧ್ಯತೆ ಇದ್ದು, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೂ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದ ಅವರು, ನಮ್ಮಲ್ಲಿ ಮೂಲ, ವಲಸಿಗ ಕಾಂಗ್ರೆಸ್ ಎಂಬುವ ಭಾವನೆಯೇ ಇಲ್ಲ ಎಂದು ತಿಳಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)