varthabharthi

ಕರ್ನಾಟಕ

ನಾಳೆ ರೈತರಿಂದ ವಿಧಾನಸೌಧಕ್ಕೆ ಮುತ್ತಿಗೆ

ವಾರ್ತಾ ಭಾರತಿ : 9 Oct, 2019

ಬೆಂಗಳೂರು, 9: ರಾಜ್ಯ ಮತ್ತು ಕೇಂದ್ರ ಸರ್ಕಾರದ ಧೋರಣೆಯನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಅ.10ರಂದು ಬೆಳಗ್ಗೆ 11 ಗಂಟೆಗೆ ಸಾವಿರಾರು ರೈತರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಮೆರವಣಿಗೆಯಲ್ಲಿ ಹೊರಟು ವಿಧಾನಸೌಧವರೆಗೆ ಬೃಹತ್ ಪ್ರತಿಭಟನೆ ನಡೆಸಿ, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ.

ರಾಜ್ಯದಲ್ಲಿ ನಿರಂತರವಾಗಿ ಬರಗಾಲ ಮತ್ತು ಉತ್ತರ ಕರ್ನಾಟಕದಲ್ಲಿ ನೆರೆ ಮತ್ತು ಪ್ರವಾಹದಿಂದ ಹಲವು ಸಂಕಷ್ಟಗಳಿಗೀಡಾಗಿದ್ದು, ಸಾಕಷ್ಟು ರೈತರ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದರೂ ರಾಜ್ಯ ಮತ್ತು ಕೇಂದ್ರ ಸರಕಾರ ರೈತರಿಗೆ ಸರಿಯಾದ ಸ್ಪಂದನೆ ಮಾಡದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)