varthabharthi

ಬೆಂಗಳೂರು

​ಬೆಂಗಳೂರು: ಹಲ್ಲೆ ನಡೆಸಿ ಯುವಕನ ಕೊಲೆ

ವಾರ್ತಾ ಭಾರತಿ : 9 Oct, 2019

ಬೆಂಗಳೂರು, ಅ.9: ಯುವಕನೊಬ್ಬನ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಘಟನೆ ರಾಜಾಜಿನಗರದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಮಹಾಲಕ್ಷ್ಮೀ ಲೇಔಟ್‌ನ ಪ್ರಣವ್(28) ಕೊಲೆಯಾದ ಯುವಕ ಎಂದು ಪೊಲೀಸರು ಗುರುತಿಸಿದ್ದಾರೆ.

ಮಂಗಳವಾರ ರಾತ್ರಿ ಮನೆಯಿಂದ ರಾಜಾಜಿನಗರದ ಕೈಗಾರಿಕಾ ಪ್ರದೇಶದ ಪಾರ್ಕ್‌ಗೆ ಪ್ರಣವ್ ವಾಕಿಂಗ್ ಮಾಡಲು ಹೋಗಿದ್ದರು. ಸ್ನೇಹಿತರ ಜೊತೆ ಮಾತನಾಡುತ್ತಿದ್ದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸ್ನೇಹಿತರು, ಪ್ರಣವ್ ಮೇಲೆ ಹಲ್ಲೆ ನಡೆಸಿ, ಪಾರ್ಕ್‌ನ ಕಟ್ಟೆಯ ಮೇಲೆ ನೂಕಿದ್ದಾರೆ ಎನ್ನಲಾಗಿದೆ.

ತಲೆ ಹಿಂಬದಿಯಲ್ಲಿ ಗಾಯಗೊಂಡು ಅಸ್ವಸ್ಥನಾಗಿದ್ದ ಪ್ರಣವ್‌ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿರುವ ಮಾಗಡಿ ರಸ್ತೆ ಠಾಣಾ ಪೊಲೀಸರು, ಆರೋಪಿಗಳ ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)