varthabharthiಕರ್ನಾಟಕ

ಅಪ್ರಾಪ್ತೆಯ ಅತ್ಯಾಚಾರ ಯತ್ನ: ಆರೋಪಿ ಬಂಧನ

ವಾರ್ತಾ ಭಾರತಿ : 10 Oct, 2019

ಸಿದ್ದಾಪುರ, ಅ.10: ಹನ್ನೆರಡು ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಸಿದ್ದಾಪುರ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ

ಚೆನ್ನಯ್ಯನಕೋಟೆಯ ನಿವಾಸಿ ಬೀರಾನ್( 60) ಎಂಬಾತನೇ ಹನ್ನೆರಡು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಂಧಿತ ಆರೋಪಿಯಾಗಿದ್ದಾನೆ.

ಚೆನ್ನಯ್ಯನಕೊಟೆ ಗ್ರಾಮದಲ್ಲಿ ಅಂಗಡಿ ವ್ಯಾಪಾರ ನಡೆಸುತ್ತಿರುವ ಬೀರಾನ್ ತನ್ನ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅಂಗಡಿಗೆ ಬಂದ ಬಾಲಕಿಯನ್ನು ಮನೆಗೆ ಕರೆಸಿ ಅತ್ಯಾಚಾರಕ್ಕೆ ಯತ್ನ ನಡೆಸಿದ್ದ ಎನ್ನಲಾಗಿದೆ

ವಿಷಯ ತಿಳಿದ ಸ್ಥಳೀಯರು ಮನೆಯ ಸಮೀಪ ತೆರಳುತ್ತಿದ್ದಂತೆ ಅಪ್ರಾಪ್ತ ಬಾಲೆಯನ್ನು ಬಿಟ್ಟು ಕಳಿಸಿದ್ದಾನೆ. ಆಕ್ರೋಶಗೊಂಡ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸಿದ್ದಾಪುರ ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)