varthabharthiಕರ್ನಾಟಕ

ಭಾರತ ಗೌರವ ಪ್ರಶಸ್ತಿಗೆ ಕೆ.ಎಂ.ನಾಗರತ್ನ ಆಯ್ಕೆ

ವಾರ್ತಾ ಭಾರತಿ : 10 Oct, 2019

ಮಂಡ್ಯ, ಅ.10: ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಎಂ.ನಾಗರತ್ನ ರಾಷ್ಟ್ರಮಟ್ಟದ ಭಾರತ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಲಾಸಂಘ ಸಂಸ್ಥೆಯ ಕಾರ್ಯದರ್ಶಿ ಮಾರುತಿ ಬಡಿಗೇರ್ ತಿಳಿಸಿದ್ದಾರೆ.

ಜನಕಪುರಿ ಕನ್ನಡ ಕೂಟ ನವದೆಹಲಿ ಹಾಗೂ ಕಲಾಸಂಕುಲ ಸಂಸ್ಥೆ ಇವರ ಸಹಯೋಗದಲ್ಲಿ ದೆಹಲಿಯ ಕರ್ನಾಟಕ ಸಂಘದ ಆವರಣದಲ್ಲಿ ಅ.16ರಂದು  ನಡೆಯುವ ಕನ್ನಡಿಗರ ನುಡಿಹಬ್ಬ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಸುರೇಶ ಅಂಗಡಿ ಪ್ರದಾನ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)