ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಚಿಂಚನಸೂರ್ ನೇಮಕ
ಬೆಂಗಳೂರು, ಅ. 13: ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಅವರನ್ನು ಕೋಲಿ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
‘ಕೋಲಿ ಸಮುದಾಯ ಅಭಿವೃದ್ಧಿ ನಿಗಮ’ವು ಸ್ಥಾಪನೆ ಹಂತದಲ್ಲಿರುವುದರಿಂದ ನಿಗಮವು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಗೊಳ್ಳುವವರೆಗೂ, ನಿಗಮದ ಅಧ್ಯಕ್ಷರಿಗೆ ರಾಜ್ಯ ಸಚಿವ ಸಂಪುಟ ದರ್ಜೆ ಸ್ಥಾನಮಾನದ ಸೌಲಭ್ಯಗಳನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಶಿಷ್ಟಾಚಾರ)ಒದಗಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
Next Story