varthabharthi


ಕರ್ನಾಟಕ

ಸವದಿ ಬದಲು ರಾಮುಲುಗೆ ಬಳ್ಳಾರಿ ಉಸ್ತುವಾರಿ ಕೊಡಿ: ಶಾಸಕ ಜಿ.ಸೋಮಶೇಖರ್‌ ರೆಡ್ಡಿ

ವಾರ್ತಾ ಭಾರತಿ : 14 Oct, 2019

ಬಳ್ಳಾರಿ, ಅ.13: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಬದಲು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಕೊಡಬೇಕು. ಹೀಗೆ ಮಾಡುವುದರಿಂದ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಶಾಸಕ ಜಿ.ಸೋಮಶೇಖರ್‌ ರೆಡ್ಡಿ ಹೇಳಿದ್ದಾರೆ.

ರವಿವಾರ ಬಳ್ಳಾರಿ ನಗರದಲ್ಲಿ ನಡೆದ ವಾಲ್ಮೀಕಿ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸವದಿ ಅವರಿಗೆ ಬಳ್ಳಾರಿ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ. ಅವರು ಮೂಲತಃ ಬೆಳಗಾವಿ ಜಿಲ್ಲೆಯವರಾಗಿರುವ ಕಾರಣ ಬಂದು ಹೋಗಲು ಆಗುತ್ತಿಲ್ಲ. ಸ್ಥಳೀಯರಾದ ಶ್ರೀರಾಮುಲು ಅವರಿಗೆ ಜಿಲ್ಲಾ ಉಸ್ತುವಾರಿ ಕೊಟ್ಟರೆ ಅಭಿವೃದ್ಧಿ ಅನುಕೂಲವಾಗುತ್ತದೆ ಎಂದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)