ಕಾಡಾನೆ ಹಿಂಡು ದಾಳಿ: ಜೋಡುಪಾಲ ಗ್ರಾಮಸ್ಥರಲ್ಲಿ ಆತಂಕ
ಮಡಿಕೇರಿ ಅ.17 : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಸುಮಾರು ನಾಲ್ಕರಿಂದ ಐದು ಕಾಡಾನೆಗಳ ಹಿಂಡು ದಾಳಿ ಮಾಡಿದೆ.
ಬುಧವಾರ ರಾತ್ರಿ ಗ್ರಾಮಕ್ಕೆ ಲಗ್ಗೆ ಇಟ್ಟ ಕಾಡಾನೆಗಳು ಬಹುತೇಕ ಎಲ್ಲಾ ತೋಟಗಳಿಗೆ ನುಗ್ಗಿ ಬೆಳೆಗಳನ್ನು ನಾಶ ಪಡಿಸಿವೆ. ಕಾಫಿ ಹಾಗೂ ಬಾಳೆ ಕೃಷಿ ಸಂಪೂರ್ಣವಾಗಿ ಹಾನಿಗೀಡಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಲಕ್ಷಾಂತರ ರೂ.ನಷ್ಟವಾಗಿದೆ ಎಂದು ತಿಳಿಸಿರುವ ಸ್ಥಳೀಯರು, ಅರಣ್ಯ ಇಲಾಖೆ ಜೀವಹಾನಿ ಸಂಭವಿಸುವ ಮೊದಲು ಎಚ್ಚೆತ್ತುಕೊಂಡು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
Next Story