varthabharthi


ಮಾಹಿತಿ - ಮಾರ್ಗದರ್ಶನ

ಪಿಎಚ್‌ಡಿ ಸಂಶೋಧನೆಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 21 Oct, 2019

ಉಡುಪಿ, ಅ.21: ಕರ್ನಾಟಕ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿಎಸ್‌ಟಿ) ವಿಜ್ಞಾನ ಮತ್ತು ಇಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಸಂಶೋಧನೆಗೆ ಡಿಎಸ್‌ಟಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಾಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸುತ್ತಿದೆ.

2019-20ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆ/ ಕಾಲೇಜುಗಳಲ್ಲಿ ಈಗಾಗಲೇ ಪಿಎಚ್‌ಡಿ ಪದವಿಗೆ ನೊಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 16ರೊಳಗೆ ಸಲ್ಲಿಸಬೇಕು. http://ksteps.karnataka.gov.in -ನಲ್ಲಿ ಹೆಚ್ಚಿನ ವಿವರಗಳನ್ನು ಪಡೆುಬಹುದು ಎಂದು ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)