varthabharthi

ಕರಾವಳಿ

ದ.ಕ. ಜಿಲ್ಲೆಯಲ್ಲಿ ಅ.26ರವರೆಗೆ ರೆಡ್ ಅಲರ್ಟ್ ಘೋಷಣೆ

ವಾರ್ತಾ ಭಾರತಿ : 21 Oct, 2019

ಮಂಗಳೂರು, ಅ.21: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆಯು ಅ.26ರವರೆಗೆ ರೆಡ್ ಅಲರ್ಟ್ ಘೋಷಿಸಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಂಡಿದ್ದು, ರಾಜ್ಯದ ಕರಾವಳಿ ಪ್ರದೇಶಗಳಾದ ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆ ಸುರಿಯಲಿದೆ. ಅ.22ರಂದು ಯೆಲ್ಲೋ ಅಲರ್ಟ್ ಇರಲಿದೆ. ಅ.23ರಂದು ಬೆಳಗ್ಗೆ 8:30ರಿಂದ ಆರಂಭಗೊಳ್ಳುವ ರೆಡ್ ಅಲರ್ಟ್ ಅ.26ರಂದು ಬೆಳಗ್ಗೆ 8:30ರವರೆಗೂ ಮುಂದುವರಿಯಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)