ಹ್ಯಾಟ್ರಿಕ್ ಸಾಧನೆಯೊಂದಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಯೋಗ ಪ್ರತಿಭೆ ಶ್ರೇಯ
ಬಜ್ಪೆ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೇಯಾ ಬೀದರ್ ನಲ್ಲಿ ನಡೆದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಕೋಲ್ಕತ್ತದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಸತತ 3ನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಇವರು ಹರಿರಾಜ ಶೆಟ್ಟಿಗಾರ್ ಕಿನ್ನಿಗೋಳಿ ಇವರ ಶಿಷ್ಯೆ. ಇವರು ಮೂರುಕಾವೇರಿ ಕಿನ್ನಿಗೋಳಿ ನಿವಾಸಿ ನಾರಾಯಣ ಹಾಗೂ ಶಶಿಕಲಾ ದಂಪತಿಯ ಪ್ರಥಮ ಪುತ್ರಿ.
Next Story