ಗಾಂಜಾ ಮಾರಾಟ: 24 ಮಂದಿ ಬಂಧನ, 8.3 ಕೆಜಿ ಗಾಂಜಾ ಜಪ್ತಿ
ಬೆಂಗಳೂರು, ಅ.22: ಮಾದಕ ವಸ್ತು ಗಾಂಜಾ ಮಾರಾಟ ಜಾಲವನ್ನು ಬೇಧಿಸಿರುವ ಉತ್ತರ ವಿಭಾಗದ ಪೊಲೀಸರು, 24 ಮಂದಿಯನ್ನು ಬಂಧಿಸಿ, 8 ಕೆಜಿ 372 ಗ್ರಾಂ ಗಾಂಜಾ ಜಪ್ತಿ ಮಾಡಿದ್ದಾರೆ.
ನಗರದ ಮಲ್ಲೇಶ್ವರಂ, ಯಶವಂತಪುರ, ಜೆಸಿ ನಗರದ ಉಪ ವಿಭಾಗದ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಪೊಲೀಸರು, 24 ಮಂದಿ ಆರೋಪಿಗಳ ಜಾಲಬೇಧಿಸಿ 12 ಪ್ರಕರಣಗಳನ್ನು ಪತ್ತೆ ಹಚ್ಚಿದ್ದಾರೆ.
ಅಷ್ಟೇ ಅಲ್ಲದೆ, ಗಾಂಜಾ ಮಾರಾಟವನ್ನೆ ವೃತ್ತಿ ಮಾಡಿಕೊಂಡಿದ್ದ 37 ಮಂದಿಯನ್ನು ಬಂಧಿಸಿ ಅವರ ಮೇಲೆ ಭದ್ರತಾ ಕಾಯ್ದೆಯಡಿ 28 ಪ್ರಕರಣಗಳನ್ನು ದಾಖಲಿಸಲಾಗಿದೆ. ಶಾಲಾ ಮತ್ತು ಕಾಲೇಜುಗಳ ಬಳಿಯ ಅಂಗಡಿಗಳ ಮೇಲೆ ದಾಳಿ ನಡೆಸಿ ಬೀಡಿ, ಸಿಗರೇಟು ಇನ್ನಿತರ ಮತ್ತು ತರಿಸುವ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ 221 ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಳೆದ ನಾಲ್ಕು ದಿನಗಳಿಂದ ಸತತ ದಾಳಿ ನಡೆಸಿ ಮಾದಕ ವಸ್ತು ಸೇವನೆ ಹಾಗೂ ಮಾರಾಟವನ್ನು ಬೇಧಿಸಲಾಗಿದೆ ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.
Next Story