ಸಬ್ ರಿಜಿಸ್ಟ್ರಾರ್ ವಂಚನೆ ಪ್ರಕರಣ: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ
ಬೆಂಗಳೂರು, ನ.6: ರಿಯಲ್ ಎಸ್ಟೇಟ್ ಮಾಫಿಯಾ ಜತೆಗೂಡಿ ಕೆಲ ಸಬ್ ರಿಜಿಸ್ಟ್ರಾರ್ಗಳು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆಂಬ ಆರೋಪ ಕೇಳಿಬಂದ ಬೆನ್ನಲೇ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ನಿವಾಸಿ ಸೋಮಣ್ಣ ಎಂಬಾತ ಬಂಧಿತ ರಿಯಲ್ ಎಸ್ಟೇಟ್ ಉದ್ಯಮಿ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿ ಸೋಮಣ್ಣ, ಐದು ಎಕರೆ ಜಮೀನಿನಲ್ಲಿ ನಿವೇಶನಗಳನ್ನು ಮಾಡಿ ಮಾರಾಟ ಮಾಡಿದ್ದರು. ಆದರೆ, ಕೆಲ ಭೂಮಿಯಲ್ಲಿ ಅಕ್ರಮವಾಗಿ ಕರಾರು ಪತ್ರ ಮಾಡಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story