varthabharthi


ಕರ್ನಾಟಕ

ಮೈಸೂರಿಗೆ ಆಗಮಿಸಿದ ಡಿ.ಕೆ.ಶಿವಕುಮಾರ್: ಕಾರ್ಯಕರ್ತರಿಂದ ಸ್ವಾಗತ

ವಾರ್ತಾ ಭಾರತಿ : 7 Nov, 2019

ಮೈಸೂರು: ಇಂದು ಮೈಸೂರಿಗೆ ಆಗಮಿಸಿದ  ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಅಭಿಮಾನಿಗಳು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಅದ್ದೂರಿಯಾಗಿ ಸ್ವಾಗತಿಸಿದರು.

ಬೆಂಗಳೂರಿನಿಂದ ಗುರುವಾರ ಶತಾಬ್ದಿ ಎಕ್ಸ್ ಪ್ರೆಸ್ ರೈಲಿನಲ್ಲಿ ಆಗಮಿಸಿದ ಅವರನ್ನು ಅವರ ಅಭಿಮಾನಿಗಳು, ಕಾರ್ಯಕರ್ತರು ಮೈಸೂರು ಪೇಟ ತೊಡಿಸಿ, ರೇಷ್ಮೆ ಶಾಲು, ಗಂಧದ ಹಾರ ಮತ್ತು ಪುಷ್ಪಗುಚ್ಚ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.

ನಂತರ ತೆರೆದ ವಾಹನದಲ್ಲಿ ರೈಲ್ವೆ ನಿಲ್ದಾಣದಿಂದ ಪಕ್ಕದಲ್ಲೇ ಇರುವ ಕಾಂಗ್ರೆಸ್ ಕಚೇರಿಗೆ ಮೆರವಣಿಗೆ ಮೂಲಕ ಕರೆದುಕೊಂಡು ಬರಲಾಯಿತು. ಈ ಸಂದರ್ಭ ಮಾಜಿ ಸಂಸದ ಆರ್.ಧ್ರುವನಾರಾಯಣ್, ಶಾಸಕರುಗಳಾದ, ನರೇಂದ್ರ, ತನ್ವೀರ್ ಸೇಠ್,  ಅನಿಲ್ ಚಿಕ್ಕಮಾದು, ಆರ್.ಧರ್ಮಸೇನಾ,‌ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್, ಕಾಂಗ್ರೆಸ್ ಮುಖಂಡರಾದ ದಾಸೇಗೌಡ, ಡಾ.ವಿಜಯ್ ಕುಮಾರ್, ಮೂರ್ತಿ, ಹೆಡತಲೆ ಮಂಜುನಾಥ್,  ಶೌಕತ್ ಅಲಿಖಾನ್, ಲೋಕೇಶ್, ಶ್ರೀನಾಥ್ ಬಾಬು, ಯಶವಂತ್, ಟಿ.ಬಿ.ಚಿಕ್ಕಣ್ಣ ಸೇರಿದಂತೆ ಹಲವಾರು ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)