varthabharthiಕರ್ನಾಟಕ

ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಮಗು ಮೃತ್ಯು, ತಾಯಿಯ ರಕ್ಷಣೆ

ವಾರ್ತಾ ಭಾರತಿ : 7 Nov, 2019

ಶಿವಮೊಗ್ಗ, ನ. 7: ತಾಯಿಯೋರ್ವಳು ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮಸ್ಥರು ತಾಯಿಯನ್ನು ರಕ್ಷಿಸುವಲ್ಲಿ ಸಫಲವಾಗಿದ್ದಾರೆ. ಆದರೆ ಮಗು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ಗುರುವಾರ ನಡೆದಿದೆ. 

ಕೌಶಿಕ್ (3) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ತಾಯಿ ಚೈತ್ರ (23) ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ ಈ ಕೃತ್ಯಕ್ಕೆ ಮುಂದಾಗಿದ್ದಾಳೆ ಎನ್ನಲಾಗಿದೆ. ಇವರು ಬಾವಿಗೆ ಹಾರಿದ್ದನ್ನು ಗಮನಿಸಿದ ಕೆಲ ಗ್ರಾಮಸ್ಥರು ರಕ್ಷಣೆಗೆ ಧಾವಿಸಿದ್ದಾರೆ. ತಾಯಿಯನ್ನು ಮಾತ್ರ ರಕ್ಷಣೆ ಮಾಡಲು ಸಾಧ್ಯವಾಗಿದೆ. ಆದರೆ ನೀರಿನಲ್ಲಿ ಮುಳುಗಿ ಮಗು ಅಸುನೀಗಿತ್ತು ಎಂದು ಹೇಳಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)